ಬೆಳ್ತಂಗಡಿ : ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಪೊಲೀಸರು ನಿರ್ಬಂಧ ಹೇರಿದ್ದಾರೆ ಎಂದು ವರದಿಯಾಗಿದೆ.
ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಡಿಯಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರನ್ನು ಪೊಲೀಸರು ಬಂಧಿಸಿದ್ದು, ಇದರ ವಿರುದ್ಧ ಮೇ.20 ರಂದು ಬೆಳಗ್ಗೆ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಲು ಯುವ ಮೋರ್ಚಾ ಸಿದ್ಧತೆ ನಡೆಸಿತ್ತು.

ಬೆಳ್ತಂಗಡಿಯ ಸಂತೆಕಟ್ಟೆಯ ಅಯ್ಯಪ್ಪ ಮಂದಿರದಿಂದ ತಾಲೂಕು ಕಚೇರಿಯವರೆಗೆ ಜಾಥಾ ನಡೆಸಲೆಂದು ಕಾರ್ಯಕರ್ತರು ಸೇರಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಧ್ವನಿವರ್ಧಕ ಮೂಲಕ ನೀತಿ ಸಂಹಿತೆಯ ಕುರಿತು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಪ್ರತಿಭಟನೆಗಳಿಗೆ ಅವಕಾಶವಿಲ್ಲ ಎಂದು ಸೂಚನೆ ನೀಡಿದ್ದಾರೆ.
ಬೆಳ್ತಂಗಡಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.


























