ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆಗೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ನಿಯೋಗದ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದರು. ಪೊಲೀಸ್ ಇಲಾಖೆಯ ನಡೆಯ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಲೋಕಸಭಾ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಸಹಿತ ಬಿಜೆಪಿ ಪ್ರಮುಖರು ಹಾಗೂ ಹಲವಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


























