ಬಂಟ್ವಾಳ : ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಸಜೀಪ ನಿವಾಸಿ ಅಲ್ತಾಫ್ ಮೃತ ಯುವಕ.
ಬಿಸಿರೋಡಿನಿಂದ ಬರುತ್ತಿದ್ದ ರಿಕ್ಷಾ ಹಾಗೂ ಪಾಣೆಮಂಗಳೂರು ಪೇಟೆಯಿಂದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿದೆ.
ರಸ್ತೆಗೆ ಎಸೆದ ರಭಸಕ್ಕೆ ಯುವಕನ ತಲೆಗೆ ಗಂಭೀರವಾದ ಗಾಯವಾಗಿತ್ತು. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


























