ಚೆನ್ನೈನ ಅಪಾರ್ಟ್ಮೆಂಟ್ನ ಬಾಲ್ಕನಿಯೊಂದರಿಂದ ಬೀಳುತ್ತಿದ್ದ ಮಗುವನ್ನು ರಕ್ಷಣೆ ಮಾಡಿ ವಾರಗಳ ಬಳಿಕ ಮಗುವಿನ ತಾಯಿ ಶವವಾಗಿ ಪತ್ತೆಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳನ್ನು ಎದುರಿಸಿದ ತಾಯಿ ಸಾವಿನ ದಾರಿ ಹಿಡಿದಿದ್ದಾರೆ.
ಅಪಾರ್ಟ್ಮೆಂಟ್ನ ಬಾಲ್ಕನಿಯೊಂದರಿಂದ ಬೀಳುತ್ತಿದ್ದ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ರಕ್ಷಣೆ ಮಾಡಿದವರನ್ನು ಪ್ರಶಂಸೆ ಮಾಡಲಾಯಿತಾದರೂ ಮಗುವಿನ ತಾಯಿಯ ನಿರ್ಲಕ್ಷ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದವು.

ಅನೇಕ ಟೀಕೆಗಳನ್ನು ಎದುರಿಸಿ ಅದರಿಂದ ಬೇಸತ್ತು ಮಗುವಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮಗು ಬಿದ್ದ ಘಟನೆಗೆ ತಾಯಿ ರಮ್ಯಾನೇ ಕಾರಣ ಎಂದು ಟೀಕಿಸಿದ್ದರಿಂದ ನೊಂದಿದ್ದರು ಎಂದು ತಿಳಿದುಬಂದಿದೆ.
ಏಪ್ರಿಲ್ 28 ರಂದು ಚೆನ್ನೆೈ ಅಪಾರ್ಟ್ ಮೆಂಟ್ ನಲ್ಲಿ ಮಗುವೊಂದು ಆಕಸ್ಮಿಕವಾಗಿ ಮೇಲ್ಛಾವಣಿಯಲ್ಲಿ ಸಿಲುಕಿತ್ತು. ಅದನ್ನು ಕಂಡ ಸ್ಥಳೀಯರು ಮಗುವಿನ ರಕ್ಷಣೆ ಮಾಡಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಮಾತ್ರವಲ್ಲದೆ, ಮಗು ಈ ರೀತಿ ಬೀಳಲು ಮಗುವಿನ ತಾಯಿ ನಿರ್ಲಕ್ಷ್ಯ ಎಂದು ಅನೇಕರು ಸೋಷಿಯಲ್ ಮೀಡಿಯಾಗಳಲ್ಲಿ ಟೀಕೆಗಳನ್ನು ಮಾಡಿದ್ದರು. ಈ ಟೀಕೆಯಿಂದ ನೊಂದು ಮಗುವಿನ ತಾಯಿ ರಮ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ.


























