ಬಂಟ್ವಾಳ : ಬೋರ್ವೆಲ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಲ್ಲಿಪಾದೆ ಎಂಬಲ್ಲಿ ನಡೆದಿದೆ.
ಅಲ್ಲಿಪಾದೆ ಸಮೀಪದ ಪರಾರಿ ಜಯಪೂಜಾರಿ ( 55) ಮೃತ ವ್ಯಕ್ತಿ, ಅವರ ಮಗ ರಕ್ಷಿತ್ ಸಹಸವಾರನಾಗಿದ್ದು, ಈತನಿಗೆ ಗಾಯವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಕೂಟರ್ ನಲ್ಲಿ ತಂದೆ ಮಗ ಸಂಚಾರ ಮಾಡುತ್ತಿರುವ ವೇಳೆ ಲಾರಿ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

























