ಸುಳ್ಯ : ಅಕ್ರಮವಾಗಿ ಗೋವುಗಳನ್ನು ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದಾರೆಂದು ಆರೋಪಿಸಿ ಸ್ಥಳೀಯರು ವಾಹನವನ್ನು ಅಡ್ಡಗಟ್ಟಿದ ಘಟನೆ ಎಲಿಮಲೆಯ ಅಂಬೆಕಲ್ಲಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಸುಳ್ಯದ ಎಲಿಮಲೆಯ ಅಂಬೆಕಲ್ಲು ಕಡೆಯಿಂದ 4 ದನಗಳನ್ನು ಮಧ್ಯರಾತ್ರಿ 3 ಗಂಟೆಯ ವೇಳೆಗೆ ಪಿಕಪ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದಾರೆಂದು ಆರೋಪಿಸಿ ಎಲಿಮಲೆ ಅಂಬೆಕಲ್ಲು ರಸ್ತೆಯ ಕಲ್ಪಣೆ ಎಂಬಲ್ಲಿ ಸ್ಥಳೀಯರು ವಾಹನವನ್ನು ಅಡ್ಡಗಟ್ಟಿದರು.
ಈ ವೇಳೆ ಜೀಪಿನಿಂದ ಇಬ್ಬರು ಪರಾರಿಯಾಗಿದ್ದು, ಮತ್ತಿಬ್ಬರನ್ನು ಸ್ಥಳೀಯರು ಹಿಡಿದಿದ್ದರು. ಅವರನ್ನು ವಿಚಾರಿಸಿದಾಗ ಪುತ್ತೂರು ಪಡ್ಡಾಯೂರಿನ ಹರೀಶ್ ಮತ್ತು ಕೊಣಾಜೆಯ ಇಬ್ರಾಹಿಂ ಎಂದು ತಿಳಿದು ಬಂದಿದೆ.
ಈ ಬಗ್ಗೆ ಠಾಣೆಗೆ ಮಾಹಿತಿ ನೀಡಿದ್ದು, ಕಡಬ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.