ಬಂಟ್ವಾಳ: ಅಸೌಖ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಂಚಿ ನಿವಾಸಿ ಬಂಟ್ವಾಳ ನಗರ ಠಾಣಾ ಎ.ಎಸ್.ಐ.ಜಯರಾಮ ರೈ (58)ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಕೊನೆಯುಸಿರೆಳೆದರು.
ಅವರು ಕೆಲ ದಿನಗಳಿಂದ ಬೆನ್ನು ನೋವು ಸಮಸ್ಯೆ ಯಿಂದ ಬಳಲುತ್ತಿದ್ದು ಒಂದು ವಾರದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.
ಇವರು ದ.ಕ.ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಹಲವಾರು ವರ್ಷಗಳಿಂದ ಅಪರಾಧ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಅವರು ಇತ್ತೀಚಿನ ವರ್ಷಗಳಿಂದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ.ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೃತರು ಪತ್ನಿ , ಪುತ್ರ, ಪುತ್ರಿ ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.