ಮಂಗಳೂರು : ನಗರದ ಕಂಕನಾಡಿಯ ಮಸೀದಿಯೊಂದರ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಮೇ.24 ರಂದು ನಮಾಜ್ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.
ಈ ವೀಡಿಯೋ ಪರಿಶೀಲಿಸಲಾಗಿದ್ದು, ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡೆತಡೆಯನ್ನುಂಟು ಮಾಡಿದ ವ್ಯಕ್ತಿಗಳ ಮೇಲೆ ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.


























