ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಬಸ್ ಚಾಲಕ ಸಹಿತ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿ.ಸಿ.ರೋಡ್-ಕಡೂರು ರಾಜ್ಯ ಹೆದ್ದಾರಿಯ ವಗ್ಗ ಸಮೀಪದ ಕಾರಿಂಜ ಕಾಡಬೆಟ್ಟು ತಿರುವಿನಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಈ ವೇಳೆ ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುವ ಬಸ್ ಗೆ ಡಿಕ್ಕಿಯಾಗಿದ್ದು, ಬಸ್ ಚಾಲಕನ ಸಹಿತ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.


























