ಉಪ್ಪಿನಂಗಡಿ : ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರವನ್ನು ಪೂರ್ಣ ಪ್ರಮಾಣದ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸುವ ಬಗ್ಗೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಸಂಗಮ ಕ್ಷೇತ್ರವೆಂದೇ ಖ್ಯಾತಿಯ ಉಪ್ಪಿನಂಗಡಿ ಪಟ್ಟಣವೂ ಪುತ್ತೂರು, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳ ಜನರ ವ್ಯವಹಾರಿಕ ಸಂಪರ್ಕವಾಗಿರುವ ಪಟ್ಟಣವಾಗಿದ್ದು, ಈ ಭಾಗದ ಆಸುಪಾಸಿನ ಜನರಿಗೆ ಇದು ಒಂದೇ ಪ್ರಮುಖ ಆಸ್ಪತ್ರೆಯಾಗಿದೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆ ಸಮರ್ಪಕ ವೈದ್ಯಕೀಯ ಸಲಕರಣೆಗಳ, ನುರಿತ ವೈದ್ಯ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ. ಇದೀಗ ಕೋವಿಡ್ ಕೇರ್ ಸೆಂಟರ್ ಆಗಿಯೂ ಕಾರ್ಯ ನಿರ್ವಹಿಸಲು ಆರಂಭಿಸಿದೆ. ಆದರೆ ಮೇಲ್ಕಂಡ ಕೊರತೆಗಳಿಂದ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುವಲ್ಲಿ ಎಡವುತ್ತಿದ್ದು, ಈ ನಿಟ್ಟಿನಲ್ಲಿ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರವನ್ನು ಪೂರ್ಣ ಪ್ರಮಾಣದ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಲು ಅನುಮತಿಸಬೇಕಾಗಿ ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ತೌಸಿಪ್, ಮಾಜಿ ಬ್ಲಾಕ್ ಅಧ್ಯಕ್ಷರಾದ ಮುರಳಿದರ್ ರೈ, ಕೋಡಿಂಬಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಜಯಪ್ರಕಾಶ್ ಬದಿನಾರು ಉಪಸ್ಥಿತರಿದ್ದರು.