ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಕಾಲೇಜು ಪ್ರಾರಂಭೋತ್ಸವದ ಅಂಗವಾಗಿ ನೂತನ ಸಭಾಂಗಣ ವೈದೇಹಿಯಲ್ಲಿ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ನೇತೃತ್ವದಲ್ಲಿ ಅರುಣ್ ಹಾಗೂ ಆದಿತ್ಯಕೃಷ್ಣ ಸರಸ್ವತಿ ಪೂಜೆಯನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ, ಸದಸ್ಯರಾದ ವತ್ಸಲಾ ರಾಜ್ಞಿ ,ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ, ಉಪಪ್ರಾಂಶುಪಾಲರಾದ ದೇವಿಚರಣ್ ರೈ ,ಉಪನ್ಯಾಸಕ, ಉಪನ್ಯಾಸಕೇತರ ವೃಂದ ಹಾಗೂಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.