ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾಗಿದ್ದ ಮಹಮ್ಮದ್ ಬಡಗನ್ನೂರು ರವರನ್ನು ದ ಕ ಜಿಲ್ಲಾ ಕಾಂಗ್ರೆಸ್ ನ ವಕ್ತಾರರಾಗಿ ಕೆಪಿಸಿಸಿ ಅಧ್ಯಕ್ಷ ರಾದ ಡಿಕೆ ಶಿವಕುಮಾರ್ ರವರು ಆದೇಶದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹಮದ್ ದವರು ನೇಮಕಾತಿಗೊಳಿಸಿ ಆದೇಶ ಮಾಡಿರುತ್ತಾರೆ.
ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರ ಕೋರಿಕೆಯಂತೆ ಜಿಲ್ಲಾ ಕಾಂಗ್ರೆಸ್ ನ ಕೋರ್ ಕಮಿಟಿಯ ತೀರ್ಮಾನದಂತೆ ದ ಕ ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷರಾದ ಕೆ ಹರೀಶ್ ಕುಮಾರ್ ರವರು ಮಾಡಿರುವ ಶಿಫಾರಸ್ಸಿನಂತೆ ಈ ನೇಮಕಾತಿ ನಡೆದಿದೆ ಎಂದು ತಿಳಿದು ಬಂದಿದೆ.
ಸೌಮ್ಯ ಸ್ವಭಾವದ ಸರಳ ಸಜ್ಜನಿಕೆಯ ರಾಜಕಾರಣಿಯೆಂದು ಹೆಗ್ಗಳಿಕೆಗೆ ಪಾತ್ರರಾಗಿರುವ ಮಹಮ್ಮದ್ ಬಡಗನ್ನೂರು ರವರು ಬಡಗನ್ನೂರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ, ಎರಡು ಬಾರಿ ಪುತ್ತೂರು ತಾಲೂಕು ಪಂಚಾಯತ್ ಸದಸ್ಯರಾಗಿ ಚುನಾಯಿತರಾಗಿರುವ ಇವರು ಬಳಿಕ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುತ್ತಾರೆ.
ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿಯಾಗಿ , ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ರಾಗಿ ಪಕ್ಷದ ಸೇವೆ ಗೈದಿರುತ್ತಾರೆ
ಕುಂಬ್ರ ಸಹಕಾರಿ ಸಂಘದ ಉಪಾಧ್ಯಕ್ಷರಾಗ ಸಹಕಾರಿ ಕ್ಷೇತ್ರದಲ್ಲಿಯೂ ತನ್ನ ಸೇವಾ ಕಾರ್ಯ ಮಾಡಿರುತ್ತಾರೆ,
ಅತ್ಯುತ್ತಮ ವಾಗ್ಮಿ ಯಾಗಿರುವ ಮಹಮ್ಮದ್ ಬಡಗನ್ನೂರು ರವರು ರಾಜ್ಯ ಸರಕಾರದ ಪಂಚಾಯತ್ ರಾಜ್ ಇಲಾಖೆಯಲ್ಲಿ ರಾಜ್ಯ ಮಟ್ಟದ ಸಂಪನ್ಮೂಲವ್ಯಕ್ತಿ ಮತ್ತು ತರಬೇತುದಾರರಾಗಿ ರಾಜ್ಯಾದ್ಯಂತ ಸಂಚರಿಸಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸದಸ್ಯರಿಗೆ ತರಬೇತಿ ಕೊಡುವ ಕೆಲಸ ಮಾಡಿರುತ್ತಾರೆ
ಪ್ರಸ್ತುತ ಪಡುಮಲೆ ಜಮಾತ್ ಕಮಿಟಿಯ ಅಧ್ಯಕ್ಷರಾಗಿರುವ ಬಡಗನ್ನೂರು ರವರು ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಪಕ್ಷದ ಸಂಘಟನಾ ಕೆಲಸದಲ್ಲಿ ತನ್ನ ದಾದ ಕೊಡುಗೆಯನ್ನು ನೀಡಿರುವುದರಿಂದ ಪಕ್ಷಕ್ಕೆ ಇವರು ಮಾಡಿದ ಸೇವೆಯನ್ನು ಪರಿಗಣಿಸಿ ಜಿಲ್ಲಾ ಮಟ್ಟದ ಈ ಹುದ್ದೆಯನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.



























