ಬೆಂಗಳೂರು : ಮಗಳ ಪ್ರೇಮ ವಿವಾಹಕ್ಕೆ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ನಗರದ ಸರ್ಕಾರಿ ಆಸ್ಪತ್ರೆ ಎದುರಿನ ಪಾರ್ಕ್ನಲ್ಲಿ ನಡೆದಿದೆ.
ನೆಲಮಂಗಲ ತಾಲೂಕಿನ ಅಂಜನಾ ನಗರದ ಲಕ್ಷ್ಮಮ್ಮ ನೇಣಿಗೆ ಶರಣಾದ ಮಹಿಳೆ.
ಲಕ್ಷ್ಮಮ್ಮನ ಮಗಳು ಇತ್ತೀಚೆಗಷ್ಟೇ ಪ್ರೇಮ ವಿವಾಹವಾಗಿ ಮನೆಬಿಟ್ಟು ಹೋಗಿದ್ದಳು. ಇದರಿಂದ ಮನನೊಂದಿದ್ದ ಲಕ್ಷ್ಮಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.


























