ಮಂಡ್ಯ : ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಫಲಿತಾಂಶದ ಕಾವು ಜೋರಾಗಿದೆ. ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಹೆಚ್ಡಿಕೆ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.
ಸದ್ಯಕ್ಕೆ ಲಭ್ಯವಿರೋ ಮಾಹಿತಿ ಪ್ರಕಾರ ಕುಮಾರಸ್ವಾಮಿಗೆ 530453 ಸಿಕ್ಕಿವೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ 330412 ವೋಟ್ಗಳು ಬಿದ್ದಿವೆ. ಕೌಂಟಿಂಗ್ ಇನ್ನೂ ಮುಂದುವರಿದಿದ್ದು, ಹೆಚ್ಡಿಕೆ ಗೆಲುವು ಪಕ್ಕಾ ಆಗಿದೆ.
ಹಾಸನ ಅಶ್ಲೀಲ ವಿಡಿಯೋ ಕೇಸ್ನಿಂದ ಬೇಸತ್ತಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮೂರು ದಿನಗಳ ಕಾಲ ಪ್ರವಾಸದಲ್ಲಿ ಇದ್ದರು. ಬಳಿಕ ಒಂದಷ್ಟು ದಿನ ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ಇಂದು ತನ್ನ ಗೆಲುವಿನ ವಿಚಾರ ಗೊತ್ತಾಗುತ್ತಿದ್ದಂತೆಯೇ ಆದಿಚುಂಚನಗಿರಿ ಮಹಾ ಸಂಸ್ಥಾನದ ವಿಜಯನಗರ ಶಾಖಾ ಮಠಕ್ಕೆ ಭೇಟಿ ನೀಡಿ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ.


























