ಭಾರತದಲ್ಲಿ 7 ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.
ಈ ಬಾರಿ ಯಾವ ಪಕ್ಷಕ್ಕೂ ಮತದಾರ ಸ್ಪಷ್ಟ ಬಹುಮತ ನೀಡಿಲ್ಲ. ಆದರೆ, ಕಾಂಗ್ರೆಸ್ ನೇತೃತ್ವದ ಇಂಡಿಯ ಬಣಕ್ಕಿಂತಲೂ ಬಿಜೆಪಿ ನೇತೃತ್ವದ ಎನ್ಡಿಎ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಲು ಸಜ್ಜಾಗಿದೆ. ಈ ಮೂಲಕ ನರೇಂದ್ರ ಮೋದಿಯವರು ಸತತ 3ನೇ ಅವಧಿಗೆ ಪ್ರಧಾನ ಮಂತ್ರಿಯಾಗುವ ಸಿದ್ಧತೆಯಲ್ಲಿದ್ದಾರೆ.
ಈ ಹಿನ್ನೆಲೆಯಲ್ಲಿ ನಿನ್ನೆ ಫಲಿತಾಂಶ ಪ್ರಕಟವಾದ ನಂತರ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲು ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ಅಮಿತ್ ಶಾ ಅವರನ್ನು ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.



























