ಬೆಳ್ತಂಗಡಿ : ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ. ಮೇಲೆ ನಿನ್ನೆ ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿ ನಡೆದಿದ್ದು, ಘಟನೆಯಿಂದಾಗಿ ಗಾಯಗೊಂಡ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.




























