ಪುತ್ತೂರು : ಕೊಡಿಪ್ಪಾಡಿ ಗ್ರಾಮದ ಬಟ್ರುಪ್ಪಾಡಿ ನಿವಾಸಿ ದಿ.ಅನಿಲ್ ಪೂಜಾರಿಯವರ ಮಕ್ಕಳ ವಿದ್ಯಾಬ್ಯಾಸಕ್ಕಾಗಿ ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ಫೌಂಡೇಶನ್ ಅಧ್ಯಕ್ಷರಾದ ಪದ್ಮರಾಜ್ ಆರ್. ಪೂಜಾರಿಯವರು ಮನೆಗೆ ಭೇಟಿ ನೀಡಿ ಆರ್ಥಿಕ ನೆರವು ನೀಡಿದರು.

ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ, ಹಿಂದುಳಿದ ವರ್ಗ ಬ್ಲಾಕ್ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕೊಡಿಪ್ಪಾಡಿ ವಲಯ ಅಧ್ಯಕ್ಷ ಕೇಶವಪೆಲತ್ತಡಿ, ಪ್ರವೀಣ್ ಶೆಟ್ಟಿ ಅಳಕೆಮಜಲು, ನೌಶಾದ್ , ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ದಾಮೋದರ ಮುರ, ಶರತ್ ಕೇಫುಳು ,ನಗರ ಸಭಾ ಸದಸ್ಯ ರಿಯಾಝ್ ಪರ್ಲಡ್ಕ, ಯಂಗ್ ಬ್ರಿಗೆಡ್ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ, ಮುಂಡೂರು ಗ್ರಾಮ ಪಂಚಾಯತಿ ಸದಸ್ಯ ಕಮಲೇಶ್ ಸರ್ವೇಧೋಳ, ಮೆಸ್ಕಾಂ ಸಲಹಾ ಸಮಿತಿ ಸದಸ್ಯರಾದ ಚಂದ್ರಶೇಖರ ಕಲ್ಲಗುಡ್ಡೆ, ಚಂದ್ರ ಅರ್ಕ ಉಪಸ್ಥಿತರಿದ್ದರು.



























