ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಫಲಿತಾಂಶ ಹೊರಬಿದ್ದಿದ್ದು, ಜೆಡಿಎಸ್ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಅವರು ಜಯಶಾಲಿಯಾಗಿದ್ದಾರೆ.
ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಯಲ್ಲಿ 23,402 ಮತದಾರರಿದ್ದು, 19,320 ಶಿಕ್ಷಕರು ಮತ ಚಲಾಯಿಸಿದ್ದಾರೆ. 82.56% ಮತದಾನವಾಗಿದ್ದು, 8 ಅಭ್ಯರ್ಥಿಗಳು ಕಣದಲ್ಲಿದ್ದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿ ನಡೆದಿದ್ದು, ನೈರುತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್ ಎಲ್ ಭೋಜೇಗೌಡ ಜಯಗಳಿಸಿದ್ದಾರೆ.

























