ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.
ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿರುವ ಯುವತಿಯೋರ್ವಳು ಬಿಕರ್ನಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗ ವಿನೋದ್‌ರಾಜ್ ಎಂಬಾತನ ಸ್ನೇಹವಾಗಿತ್ತು.
ಮಾ.23ರಂದು ಯುವತಿ ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಇದ್ದಾಗ ಅಲ್ಲಿಗೆ ಬಂದ ವಿನೋದ್‌ರಾಜ್ ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಅನಂತರವೂ ಪದೇ ಪದೇ ಅತ್ಯಾಚಾರವೆಸಗಿದ್ದಾನೆ. ಬಳಿಕ ಮದುವೆಯಾಗಲು ನಿರಾಕರಿಸಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.

























