ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದಾಗಿ ಸಾರ್ವಜನಿಕರು ತೊಂದರೆಗೊಳಗಾಗುತ್ತಿದ್ದು, ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಕುರಿತು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ, ಬಂದರು ಮತ್ತು ಮೀನುಗಾರಿಕಾ ಸಚಿವರಾದ ಎಸ್ ಅಂಗಾರ, ಜಿಲ್ಲಾ ಪಂಚಾಯತ್ ಸಿಇಓ ಕುಮಾರ್, ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.