ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ತಲವಾರು ಪ್ರದರ್ಶನ ಮಾಡುತ್ತಿದ್ದ ಆರೋಪದ ಹಿನ್ನೆಲೆ ಐವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂ. 9 ರಂದು ಸಂಜೆ, ಬಂಟ್ವಾಳ ಬಡಗಬೆಳ್ಳೂರು ಎಂಬಲ್ಲಿ ಅಪರಿಚಿತ ವ್ಯಕ್ತಿಗಳು, ಸಾರ್ಜಜನಿಕವಾಗಿ ಮಾರಕಾಸ್ತ್ರವನ್ನು ಪ್ರದರ್ಶಿಸುತ್ತಿದ್ದಾರೆ ಎಂಬುದಾಗಿ, ಬಂದ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ ಹರೀಶ್ ಎಮ್.ಆರ್, ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿದಾಗ ಬೋಜರಾಜ , ವಿನೋದ್ , ವಿವೇಕ್ , ರಕ್ಷೀತ್ ,ರಕ್ಷಕ್ ಎಂಬವರುಗಳು ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಸಾರ್ವಜನಿಕವಾಗಿ ಭಯವನ್ನುಂಟು ಮಾಡುತ್ತಿರುವುದು ಕಂಡುಬಂದಿದ್ದು, ಇಲಾಖಾ ವಾಹನ ಸ್ಥಳಕ್ಕೆ ಬರುವುದನ್ನು ಕಂಡು ಪರಾರಿಯಾಗಿದ್ದಾರೆ.
ಸ್ಥಳದಲ್ಲಿದ್ದ ಆಟೋ ರಿಕ್ಷಾದಲ್ಲಿ ಒಂದು ತಲವಾರು ಪತ್ತೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 69/2024, ಕಲಂ: 25(1ಬಿ) ಭಾರತೀಯ ಶಸ್ತಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.