ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್ ಹಾಗೂ ವಿನೋದ್ ಅವರ ಮೇಲೆ ಹಲ್ಲೆ ನಡೆಸಿದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರೀಶ್ ಮತ್ತು ವಿನೋದ್ ಅವರನ್ನು ಸಂಸದ ಬ್ರಿಜೇಶ್ ಚೌಟ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಸರಣಿ ಹಲ್ಲೆಗಳು ನಡೆಯುತ್ತಿದ್ದು ಇದರ ಕುರಿತು ಸಮಗ್ರ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಕ್ಯಾಪ್ಟನ್ ಎಚ್ಚರಿಕೆ ನೀಡಿದರು.