ಬೆಂಗಳೂರು : ಕೊಲೆ ಪ್ರಕರಣವೊಂದರ ಸಂಬಂಧ ಸ್ಯಾಂಡಲ್‌ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನದ ಬೆನ್ನಲ್ಲೇ ಇದೀಗ ನಟಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಳಸಂಚು ಆರೋಪದ ಮೇಲೆ ನಟಿಯನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸದ್ಯ ಪ್ರಕರಣ ಸಂಬಂಧ ಪವಿತ್ರಾ ಗೌಡ ಹಾಗೂ ದರ್ಶನ್ ಇಬ್ಬರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಪವಿತ್ರಾ ಗೌಡ ಸೋಶಿಯಲ್ ಮೀಡಿಯಾ ಪೋಸ್ಟ್ ಗೆ ರೇಣುಕಾ ಸ್ವಾಮಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ಹೇಳಲಾಗುತ್ತಿದ್ದು, ಇದೇ ಕಾರಣಕ್ಕೆ ಬೆದರಿಸಲು ಹೋಗಿ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.