ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಸಂಗ ಹಾಗೂ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವವರಿಗೆ ಪ್ರಥಮ ಆದ್ಯತೆ ಮೇರೆಗೆ ಕೋವಿಡ್ 19 ಲಸಿಕೆಯನ್ನು ನೀಡಲು ಉದ್ದೇಶಿಸಲಾಗಿದೆ.
ಅಗತ್ಯವುಳ್ಳವರು ಜಿಲ್ಲೆಯಿಂದ ವ್ಯಾಸಂಗ ಹಾಗೂ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವವರು ವಿದೇಶಕ್ಕೆ ತೆರಳುವ ಬಗ್ಗೆ ಪೂರಕ ದಾಖಲೆಗಳೊಂದಿಗೆ ಎಸ್. ಎ. ಪ್ರಭಾಕರ ಶರ್ಮ, ಕಾರ್ಯದರ್ಶಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಘಟಕ, ರೆಡ್ ಕ್ರಾಸ್ ಭವನ, ಜಿಲ್ಲಾಧಿಕಾರಿ ಕಛೇರಿ ಹಿಂದುಗಡೆ, ಮಂಗಳೂರು ಇವರಿಗೆ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಯನ್ನು ದೂರವಾಣಿ ಸಂ. 0824 – 2423755 ಅಥಾವ ಜಿಲ್ಲಾ ವೆಬ್ ಸೈಟ್ (dk.nic.in) ನಿಂದ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.