ಮಂಗಳೂರು : ಬೋಳಿಯಾರ್ ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಮತ್ತೆ ಐವರು ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಒಟ್ಟು 11 ಮಂದಿಯ ಬಂಧನವಾಗಿದೆ.
ತಾಜುದ್ಧೀನ್ (ಸಾದಿಕ್), ಸರ್ವನ್, ಮುಬಾರಕ್, ಅಶ್ರಫ್, ತಲ್ಲತ್ ಬಂಧಿತರು.
ಈ ಮೊದಲು ಆರು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಒಟ್ಟಾರೆಯಾಗಿ ಈ ಪ್ರಕರಣದಲ್ಲಿ 11 ಮಂದಿಯ ಬಂಧನವಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.