ಪುತ್ತೂರು:ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಮಹಿಳಾ ಐಸೋಲೆಷನ್ ಕಿಟ್ ಬಿಡುಗಡೆ ಮತ್ತು ವಿತರಣೆ ಕಾರ್ಯಕ್ರಮ ನಡೆಯಿತು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೈಲಜಾ ಅಮರ್ ನಾಥ್ ನೇತೃತ್ವದಲ್ಲಿ ನೀಡಲ್ಪಡುವ ಐಸೋಲೇಶನ್ ಕಿಟ್ ವಿತರಣೆಗೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಪುತ್ತೂರಿನ ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ, ಪುತ್ತೂರು ಬ್ಲಾಕ್ ಅಧ್ಯಕ್ಷರಾದ ಯಂ.ಬಿ ವಿಶ್ವನಾಥ ರೈ ,ಪುತ್ತೂರು ಬ್ಲಾಕ್ ಮಹಿಳಾ ಅಧ್ಯಕ್ಷರಾದ ವಿಶಾಲಕ್ಷಿ ಬನ್ನೂರು,ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಅಲಿ,ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಮಹಮ್ಮದ್ ಬಡಗನ್ನೂರು,ಸಹಕಾರಿ ಯೂನಿಯನ್ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ, ಪುತ್ತೂರು ಬ್ಲಾಕ್ ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರು,ರಾಜೀವ್ ಗಾಂಧಿ ಸಮಿತಿ ಸಂಚಾಲಕ ಸಂತೋಷ್ ಭಂಡಾರಿ,ಸಾಮಾಜಿಕ ಜಾಲತಾಣದ ಮುಖ್ಯಸ್ಥ ಪೂರ್ಣೇಶ್, ಅಮರನಾಥ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.