ವಿಟ್ಲ : ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಟಿ.ಕೆ. ಮಾಸ್ಟ್ರು ಎಂದೇ ಖ್ಯಾತರಾಗಿದ್ದ ತಲಂಜೇರಿ ಕೃಷ್ಣ ಭಟ್ ನಿಧನರಾದರು.

ಅಡ್ಯನಡ್ಕ ಜನತಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ, ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು ಯಕ್ಷಗಾನ ಕಲಾವಿದರಾಗಿ, ಅರ್ಥದಾರಿಯಾಗಿ, ಸಂಘಟಕರಾಗಿ ಪ್ರಸಿದ್ಧರಾಗಿದ್ದರು.
ಉತ್ತಮ ಶಿಕ್ಷಕರಾಗಿದ್ದ ಕೃಷ್ಣ ಭಟ್ ರಾಜ್ಯ ಪ್ರಶಸ್ತಿ ಪುರಸ್ಕೃತರಾಗಿದ್ದರು.
ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.


























