ಪುತ್ತೂರು: ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯೊಬ್ಬರ ಮೃತದೇಹವನ್ನು ತರಲೆಂದು ಮಂಗಳೂರಿಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ಗೆ ವಿಟ್ಲದಿಂದ ಬರುತ್ತಿದ್ದ ಇಕೋ ಡಿಕ್ಕಿಯಾಗಿರುವ ಘಟನೆ ಕಬಕದಲ್ಲಿ ನಡೆದಿದೆ.
ಸುಳ್ಯ ಮೂಲದ ವ್ಯಕ್ತಿಯೊಬ್ಬರು ಕೋವಿಡ್ ನಿಂದಾಗಿ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಅವರ ಮೃತದೇಹವನ್ನು ತರಲು ಸುಳ್ಯದ ಪ್ರಗತಿ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ಗೆ ವಿಟ್ಲದಿಂದ ಪುತ್ತೂರು ಕಡೆ ಬರುತ್ತಿದ್ದ ಇಕೋ ಕಬಕ ಪೊಲೀಸ್ ಚೆಕ್ ಪಾಯಿಂಟ್ ಬಳಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಹಾನಿಯಾಗಿದ್ದು, ಇಕೋದಲ್ಲಿದ್ದ ಮಹಿಳೆ ಮತ್ತು ಆ್ಯಂಬುಲೆನ್ಸ್ ನಲ್ಲಿದ್ದ ವ್ಯಕ್ತಿಯೊಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.