ಬೆಂಗಳೂರು : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಫುಡ್ ಪಾಯಿಸನ್, ಕಲುಷಿತ ನೀರು ಸೇವನೆಯಿಂದ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೆಲವೆಡೆ ಸಾವನ್ನಪ್ಪಿದ್ದಾರೆ ಕೂಡ. ಹೀಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಹಾಗೂ ಲಘು ಉಪಹಾರ ಕೇಂದ್ರಗಳನ್ನು ತಪಾಸಣೆ ನಡೆಸಲು ಕ್ರಮಕೈಗೊಳ್ಳಲು ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉತ್ತಮ ಗುಣಮಟ್ಟ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and Standards Act – 2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ತಪಾಸಣೆ ನಡೆಸಿ ಸೂಕ್ತ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.



























