ಪುತ್ತೂರು : ವಿವಾಹಿತೆ ಮಹಿಳೆಯೋರ್ವರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುತ್ತೂರು ತಾಲೂಕು ಸರ್ವೆ ಗ್ರಾಮದ ಕಲ್ಲಗುಡ್ಡೆ, ಭಕ್ತಕೋಡಿಯ ಹರೀಶ ಎಂಬವರ ಪತ್ನಿ ದೀಪಿಕಾ(23) ನಾಪತ್ತೆಯಾದ ಮಹಿಳೆ.

ಪತ್ನಿ ತಾನು ಕಟ್ಟಿದ ತಾಳಿಯನ್ನು ಮನೆಯಲ್ಲಿ ಬಿಚ್ಚಿಟ್ಟು ಜೂ.13ರಂದು ಬೆಳಿಗ್ಗೆ ಮನೆಯಿಂದ ಹೋದವಳು ನಾಪತ್ತೆಯಾಗಿರುತ್ತಾಳೆ. ಮನೆಯ ಸುತ್ತಮುತ್ತ ಪರಿಸರದಲ್ಲಿ ಮತ್ತು ಸಂಬಂಧಿಕರಲ್ಲಿ ವಿಚಾರಿಸಿ ಹುಡಿಕಾಡಿದರೂ ಇಲ್ಲಿವರೆಗೂ ಪತ್ತೆಯಾಗಿರುವುದಿಲ್ಲ ಎಂದು ಹರೀಶ್ ದೂರಿನಲ್ಲಿ ತಿಳಿಸಿದ್ದಾರೆ.
ಮೂರು ತಿಂಗಳ ಹಿಂದೆಯೂ ಆಕೆ ಕಡಬದ ಕರ್ಮಾಯಿ ನಿವಾಸಿ ಪ್ರಶಾಂತ ಜೊತೆ ಹೋಗಿದ್ದು, ಬಳಿಕ ಮಂಗಳೂರಿನಲ್ಲಿ ಸಿಕ್ಕಿ ಕರೆದುಕೊಂಡು ಬಂದಿದ್ದು, ಈಗಲೂ ಪ್ರಶಾಂತ ಜೊತೆ ಹೋಗಿರುವ ಸಂಶಯವಿದೆ. ದೀಪಿಕಾರನ್ನು ಪತ್ತೆಮಾಡಿ ಕೊಡಬೇಕಾಗಿ ದೂರಿನಲ್ಲಿ ತಿಳಿಸಿದ್ದಾರೆ.



























