ಮಧ್ಯಪ್ರದೇಶದಲ್ಲಿ ಹಲವು ಮನೆಗಳ ಫ್ರಿಡ್ಜ್ನಲ್ಲಿ ಗೋಮಾಂಸ ಪತ್ತೆಯಾಗಿದ್ದು, ಜಿಲ್ಲಾಡಳಿತವು 11 ಮನೆಗಳನ್ನು ನೆಲಸಮಗೊಳಿಸಿದೆ. ನೈನ್‌ಪುರದ ಭೈಸವಾಹಿ ಪ್ರದೇಶದಲ್ಲಿ ಬಲಿ ಕೊಡಲು ಹೆಚ್ಚಿನ ಸಂಖ್ಯೆಯಲ್ಲಿ ಗೋವುಗಳನ್ನು ತರಲಾಗಿದೆ ಎಂಬ ರಹಸ್ಯ ಮಾಹಿತಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಜತ್ ಸಕ್ಲೇಚಾ ತಿಳಿಸಿದ್ದಾರೆ.
ಫ್ರಿಡ್ಜ್ಗಳಲ್ಲಿ ಗೋಮಾಂಸವಿಟ್ಟಿರುವ ಆರೋಪದ ಮೇರೆಗೆ ಜಿಲ್ಲಾಡಳಿತವು 11 ಮನೆಗಳನ್ನು ನೆಲಸಮಗೊಳಿಸಿದೆ. ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಾಂಡ್ಲಾದಲ್ಲಿ ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧದ ಕ್ರಮದ ಭಾಗವಾಗಿ, ಸರ್ಕಾರಿ ಭೂಮಿಯಲ್ಲಿ 11 ಜನರು ನಿರ್ಮಿಸಿದ್ದ ಮನೆಗಳನ್ನು ಆಡಳಿತವು ನೆಲಸಮಗೊಳಿಸಿದೆ.
ನೈನ್‌ಪುರದ ಭೈಸವಾಹಿ ಪ್ರದೇಶದಲ್ಲಿ ಬಲಿ ಕೊಡಲು ಹೆಚ್ಚಿನ ಸಂಖ್ಯೆಯಲ್ಲಿ ಗೋವುಗಳನ್ನು ತರಲಾಗಿದೆ ಎಂಬ ರಹಸ್ಯ ಮಾಹಿತಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಜತ್ ಸಕ್ಲೇಚಾ ತಿಳಿಸಿದ್ದಾರೆ. ಆರೋಪಿಗಳ ಅಡಗುತಾಣದ ಹಿಂದೆ 150 ಹಸುಗಳನ್ನು ಕಟ್ಟಿ ಹಾಕಿರುವುದು ಪತ್ತೆಯಾಗಿದೆ ಎಂದು ಎಸ್ಪಿ ಸಕ್ಲೇಚಾ ತಿಳಿಸಿದ್ದಾರೆ.
ಎಲ್ಲಾ 11 ಆರೋಪಿಗಳ ಮನೆಗಳಲ್ಲಿನ ರೆಫ್ರಿಜರೇಟರ್‌ಗಳಿಂದ ಹಸುವಿನ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ನಾವು ಪ್ರಾಣಿಗಳ ಕೊಬ್ಬು, ಚರ್ಮ ಮತ್ತು ಮೂಳೆಗಳನ್ನು ಸಹ ಕಂಡುಕೊಂಡಿದ್ದೇವೆ, ಅದನ್ನು ಕೋಣೆಯಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ವಶಪಡಿಸಿಕೊಂಡ ಮಾಂಸವು ಗೋಮಾಂಸ ಎಂದು ಸ್ಥಳೀಯ ಸರ್ಕಾರಿ ಪಶುವೈದ್ಯರು ಖಚಿತಪಡಿಸಿದ್ದಾರೆ ಎಂದು ಎಸ್ಪಿ ಹೇಳಿದರು. ಡಿಎನ್‌ಎ ವಿಶ್ಲೇಷಣೆಗಾಗಿ ನಾವು ಮಾದರಿಗಳನ್ನು ಹೈದರಾಬಾದ್‌ಗೆ ಕಳುಹಿಸಿದ್ದೇವೆ. ಸರ್ಕಾರಿ ಜಮೀನಿನಲ್ಲಿದ್ದ 11 ಆರೋಪಿಗಳ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂದರು.
ಶುಕ್ರವಾರ ರಾತ್ರಿ ಹಸುಗಳು ಮತ್ತು ಗೋಮಾಂಸ ಪತ್ತೆಯಾದ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದ 10 ಮಂದಿಗಾಗಿ ಶೋಧ ನಡೆಯುತ್ತಿದೆ. 150 ಹಸುಗಳನ್ನು ಗೋಶಾಲೆಗೆ ಕಳುಹಿಸಲಾಗಿದೆ ಎಂದು ಸಕ್ಲೇಚಾ ತಿಳಿಸಿದರು.
ಭೈನಸ್ವಾಹಿ ಪ್ರದೇಶವು ಕೆಲವು ಸಮಯದಿಂದ ಗೋವು ಕಳ್ಳಸಾಗಣೆಯ ಕೇಂದ್ರವಾಗಿದೆ. ಮಧ್ಯಪ್ರದೇಶದಲ್ಲಿ ಗೋಹತ್ಯೆಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ. ಇಬ್ಬರು ಆರೋಪಿಗಳ ಕ್ರಿಮಿನಲ್ ಇತಿಹಾಸವನ್ನು ಸಂಗ್ರಹಿಸಲಾಗಿದ್ದು, ಉಳಿದವರ ವಿವರಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.