ಸುಬ್ರಹ್ಮಣ್ಯ : ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಜಖಂಗೊಂಡ ಘಟನೆ ಸುಬ್ರಹ್ಮಣ್ಯ-ಕಡಬ ರಾಜ್ಯ ಹೆದ್ದಾರಿಯ ಕುಲ್ಕುಂದದ ವಲಯ ಅರಣ್ಯಾಧಿಕಾರಿ ಕಚೇರಿ ಬಳಿ ನಡೆದಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಯಾತ್ರಿಕರ ಕಾರು ಕುಲ್ಕುಂದ ಸಮೀಪ ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.
ಘಟನೆಯಲ್ಲಿ ವಿದ್ಯುತ್ ಕಂಬ ಮುರಿದಿದ್ದು, ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.



























