ಪುತ್ತೂರು : ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಜಿಡೆಕಲ್ಲು ಕಾಲೇಜು ಸಮೀಪ ನಡೆದಿದೆ.
ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಎಂಬವರ ಮನೆಯಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಲ್ಲಿ ಮನೆ ಹಾನಿಗೊಂಡಿದೆ.

ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದು, ಬಳಿಕ ಅಗ್ನಿಶಾಮಕದಳದವರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.