ಹಾಸನ : ಗಂಡ ತನ್ನ ಹೆಂಡತಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಲೂರು ತಾಲೂಕಿನ, ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ.
ಹರೀಶ್ (50) ಎಂಬಾತ ಪತ್ನಿ ಜಾಜಿ (45) ಎಂಬಾಕೆಯನ್ನು ಕೊಲೆ ಮಾಡಿದ್ದಾನೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕೌಟುಂಬಿಕ ಕಲಹ ಹಿನ್ನಲೆ ಹರೀಶ್ ತನ್ನ ಪತ್ನಿಯನ್ನು ಕೊಲೆಗೈದಿದ್ದಾನೆ ಎನ್ನಲಾಗುತ್ತಿದೆ. ಪ್ರತಿನಿತ್ಯ ಒಂದಲ್ಲ ಒಂದು ಕಾರಣಕ್ಕೆ ಪತಿ-ಪತ್ನಿ ಜಗಳವಾಡುತ್ತಿದ್ದರು. ನಿನ್ನೆ ರಾತ್ರಿ ವಿಕೋಪಕ್ಕೆ ತಿರುಗಿದ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಪತಿ ಹರೀಶ್ ಪತ್ನಿಗೆ ನಾಡ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ನಂತರ ನೇಣಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.