ಸುಳ್ಯ : ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿದ್ದ ಯುವಕ-ಯುವತಿಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮುಳ್ಳೇರಿಯ ಕಡೆಯಿಂದ ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಯುವಕ-ಯುವತಿ ಬರುತ್ತಿರುವ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸುಳ್ಯದಲ್ಲಿ ಕಾರನ್ನು ತಡೆದ ಪೊಲೀಸರು ಯುವಕ-ಯುವತಿಯನ್ನು ಠಾಣೆಗೆ ಕರೆದೊಯ್ಯಿದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹಿಂದೂ ಸಂಘಟನೆ ಕಾರ್ಯಕರ್ತರು ಠಾಣೆ ಮುಂಭಾಗ ಜಮಾಯಿಸಿದ್ದಾರೆ.