ಮಂಗಳೂರು : ದ.ಕ ಜಿಲ್ಲಾ ಬಿಜೆಪಿ ವಕ್ತಾರರಾಗಿ ಸತೀಶ್ ಪ್ರಭು ಆಯ್ಕೆಯಾಗಿದ್ದಾರೆ.

ಬಿಜೆಪಿಯಲ್ಲಿ ಹಲವಾರು ವರ್ಷಗಳಿಂದ ಪಕ್ಷದ ಬಲವರ್ಧನೆಗೆ ಕೊಡುಗೆಯನ್ನು ನೀಡುತ್ತಾ ಬಂದಿರುವ ಸತೀಶ್ ಪ್ರಭು ಅವರು ಪ್ರಸ್ತುತ ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯೂ ಆಗಿದ್ದು ಸಂಘನಿಕೇತನದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ಹಾಗೂ ಹಲವು ಸಂಘಟನೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿರುತ್ತಾರೆ.
ದ.ಕ. ಜಿಲ್ಲಾ ಬಿಜೆಪಿಯ ಅದ್ಯಕ್ಷರಾದ ಸತೀಶ್ ಕುಂಪಲ ಆಯ್ಕೆ ಮಾಡಿರುತ್ತಾರೆ.

























