ಪುತ್ತೂರು : ಶಾಸಕರಾದ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ, ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ದಿ.ಪ್ರಕಾಶ್ ಪುರುಷರಕಟ್ಟೆಯವರಿಗೆ ನುಡಿ ನಮನ ಕಾರ್ಯಕ್ರಮ ಜೂ.30 ರಂದು ಮಾಯ್ ದೇ ದೇವುಸ್ ಚರ್ಚ್ ಹಾಲ್ ನಲ್ಲಿ ನಡೆಯಲಿದೆ.
ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ, ಎ.ಜೆ. ಹಾಸ್ಪಿಟಲ್ ಮತ್ತು ರಿಸರ್ಚ್ ಸೆಂಟರ್ ಇವರ ಸಹಯೋಗದಲ್ಲಿ ಸಾರ್ವಜನಿಕ ಹೃದ್ರೋಗ ಪರೀಕ್ಷೆ ಶಿಬಿರ, ಉಚಿತ ಇಸಿಜಿ ಮತ್ತು ಇತರ ವೈದ್ಯಕೀಯ ಪರೀಕ್ಷೆ ನಡೆಯಲಿದೆ.



























