ಪುತ್ತೂರು : ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗಾಗಿ ಶಿಕ್ಷಣದಲ್ಲಿ ರಾಷ್ಟ್ರೀಯತೆ ಮತ್ತು ವಿದ್ಯಾರ್ಥಿಗಳ ಮನೋವಿಕಾಸದ ಬಗ್ಗೆ ಕಾರ್ಯಾಗಾರ ನಡೆಯಿತು.

ಶಾಲಾ ಸಂಚಾಲಕರಾದ ರವಿನಾರಾಯಣ.ಎಂ. ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಾಗಾರದ ಉದ್ಘಾಟಣಾ ಅವಧಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ಸುರೇಶ್ ಪರ್ಕಳ ಇವರು ಶಿಕ್ಷಣದಲ್ಲಿ ರಾಷ್ಟ್ರೀಯತೆ ಎಂಬ ವಿಷಯದ ಬಗ್ಗೆ ಮಾತನಾಡುತ್ತಾ, ಭಾರತೀಯರು ಕಲ್ಮಶರಹಿತ ತೆರೆದ ಮನಸುಳ್ಳವರು, ಭಾರತೀಯರಿಗೆ ಮನೆಯೇ ಮೊದಲ ಪಾಠಶಾಲೆ ಎಂಬುದನ್ನು ಮನೋಜ್ಞವಾಗಿ ಪ್ರಸ್ತುತಪಡಿಸಿದರು.

ಖ್ಯಾತ ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ ಇವರು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಮನೋವಿಕಾಸದ ಬಗ್ಗೆ 2 ಅವಧಿಗಳಲ್ಲಿ ಕಾರ್ಯಾಗಾರವನ್ನು ನಡೆಸಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯತೆಯನ್ನು ಅನುಭವಿಸಿ ರೂಡಿಸಿಕೊಳ್ಳುವಂತಹ ವಾತಾವರಣವನ್ನು ಶಿಕ್ಷಕರು, ಶಿಕ್ಷಣ ಸಂಸ್ಥೆಗಳು ಸಮಾಜ ನಿರ್ಮಿಸಿಕೊಡಬೇಕು ಎಂಬುದಾಗಿ ಹೇಳಿದರು.

ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಾಪಕರು ಪ್ರತಿಯೊಬ್ಬ ಮಗುವಿನ ಶಿಕ್ಷಕರಾಗಿ, ಮಾರ್ಗದರ್ಶಕರಾಗಿ, ಸ್ನೇಹಿತರಾಗಿ, ಕಲಿಕಾ ಸುಗಮಕಾರರಾಗಿ ಬಹುಮುಖಿಯಾಗಿ ವಿವಿಧ ಕಾರ್ಯಗಳನ್ನು ನಿರ್ವಹಿಸಬೇಕಾಗಿದೆ. ಆರೋಗ್ಯಕರವಾದ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿರುತ್ತದೆ. ಅಧ್ಯಾಪಕರು ತಮ್ಮ ವಿಷಯಗಳಲ್ಲಿ ಪರಿಪೂರ್ಣ ಜ್ಞಾನದೊಂದಿಗೆ ತಾಳ್ಮೆ ಹಾಗೂ ಸಹನೆಯ ಸಾಕಾರ ಮೂರ್ತಿಗಳಾಗಿರಬೇಕು. ಪಾಠ ಬೋಧನೆಯು ವಿದ್ಯಾರ್ಥಿಯ ಮನ ಮುಟ್ಟುವಂತಿರಬೇಕು
ಕಾರ್ಯಾಗಾರದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯಗುರುಗಳು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಪಾಲ್ಗೊಂಡರು.


























