ಬೆಂಗಳೂರು : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು ಅಪಾರ್ಟ್ಮೆಂಟ್‌ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಡೇವಿಡ್ ಜಾನ್ಸನ್ (52) ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಕ್ರಿಕೆಟಿಗ.
ಡೇವಿಡ್ ಜಾನ್ಸನ್ ಎಸ್‌ಎಲ್‌ವಿ ಪ್ಯಾರಡೈಸ್ ಅಪಾರ್ಟ್ಮೆಂಟ್‌ನಲ್ಲಿ 4ನೇ ಮಹಡಿಯಿಂದ ಜಿಗಿದಿದ್ದಾರೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲವಾದರೂ ಮೇಲ್ನೋಟಕ್ಕೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
1971ರ ಅಕ್ಟೋಬರ್ 16ರಂದು ಅರಸೀಕೆರೆಯಲ್ಲಿ ಜನಿಸಿದ್ದ ಡೇವಿಡ್ ಜೂಡ್ ಜಾನ್ಸನ್ ಟೀಂ ಇಂಡಿಯಾ ಪರವಾಗಿ ಆಡಿದ್ದಾರೆ. ಅಲ್ಲದೇ ರಣಜಿಯಲ್ಲಿ ಬೆಳಗಾವಿ ಪ್ಯಾಂಥರ್ಸ್, ಕರ್ನಾಟಕ ತಂಡದ ಪರವಾಗಿಯೂ ಆಡಿದ್ದಾರೆ.
ಜಾನ್ಸನ್ ಟೀಂ ಇಂಡಿಯಾ ಪರ ಆಡಿದ 2 ಟೆಸ್ಟ್ ಪಂದ್ಯ, 4 ಇನ್ನಿಂಗ್ಸ್ಗಳಲ್ಲಿ 3 ವಿಕೆಟ್ ಕಿತ್ತು, 143 ರನ್ ಬಾರಿಸಿದ್ದರು. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 39 ಪಂದ್ಯಗಳನ್ನಾಡಿದ್ದು 3,579 ರನ್ ಗಳಿಸಿ, 125 ವಿಕೆಟ್ ಕಿತ್ತಿದ್ದರು. ಲಿಸ್ಟ್-ಎ ಕ್ರಿಕೆಟ್‌ನಲ್ಲಿ 33 ಪಂದ್ಯಗಳನ್ನಾಡಿ 1,293 ರನ್ ಗಳಿಸಿ, 41 ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದರು.