ಮಂಗಳೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಂಗಳೂರಿನ ಪುರಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ-2024 ಅನ್ನು ಆಚರಿಸಲಾಯಿತು.

ಜಿಲ್ಲಾಡಳಿತದಿಂದ ಆಯೋಜಿಸಲ್ಪಟ್ಟ ಯೋಗ ಕಾರ್ಯಕ್ರಮದಲ್ಲಿ ಎಲ್ಲರು ಸಾಮೂಹಿಕ ಯೋಗಾಭ್ಯಾಸ ಮಾಡಿದರು.

ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್ ಸಿಇಓ, ಎಸ್.ಪಿ., ಡಿಸಿಪಿ ಸೇರಿದಂತೆ ವಿವಿಧ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.





























