ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನವೊಂದು ಫುಟ್ ಪಾತ್ಗೆ ಏರಿ ಅಂಗಡಿಗೆ ನುಗ್ಗಿದ ಘಟನೆ ಸುಬ್ರಹ್ಮಣ್ಯನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಘಟನೆಯೂ ನಿನ್ನೆ ಮಧ್ಯಾಹ್ನ 2.30ಕ್ಕೆ ನಡೆದಿದ್ದು, ಇದರ ಪರಿಣಾಮ ಅಪಘಾತದಲ್ಲಿ ಓರ್ವ ವ್ಯಕ್ತಿಯ ಕಾಲು ಮುರಿತವಾಗಿದೆ. ಗೂಡ್ಸ್ ವಾಹನ ಫುಟ್ ಪಾತ್ಗೆ ಏರಿ ಅಂಗಡಿಗೆ ನುಗ್ಗಿದ ಘಟನೆಯ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದೇ ಅಪಘಾತದ ವೇಳೆ ಸವಾರನೊಬ್ಬ ರಸ್ತೆಯ ಬದಿ ಬೈಕ್ ನಿಲ್ಲಿಸುತ್ತಿದ್ದ. ಇದೇ ವೇಳೆ ಯಮನಂತೆ ಬಂದ ಪಿಕಪ್ ವಾಹನವು ಏಕಾಏಕಿ ನಿಯಂತ್ರಣ ತಪ್ಪಿ ಬೈಕ್ ಸವಾರನಿಗೆ ಗುದ್ದಿದೆ. ಬಳಿಕ ಅಂಗಡಿಗೆ ನುಗ್ಗಿದೆ. ಪರಿಣಾಮ ಬೈಕ್ ಸವಾರನ ಕಾಲು ಮುರಿತವಾಗಿದೆ. ಕೂಡಲೇ ಗಾಯಾಗೊಂಡ ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಿದೆ. ಘಟನೆ ಸಂಬಂಧ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.