ಮಂಗಳೂರು : ಮಾಜಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಿ.ಎಲ್.ಪಿ.ಪದ್ಮನಾಭ ಅವರ ಮನೆಗೆ ನಿನ್ನೆ ರಾತ್ರಿ ದರೋಡೆಕೋರರ ತಂಡವೊಂದು ನುಗ್ಗಿ ಹಲ್ಲೆಗೈದು ಚಿನ್ನಾಭರಣ ಹಾಗೂ ನಗದನ್ನು ಕಳವುಗೈದಿದ್ದು, ಹಲ್ಲೆಯಿಂದ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿ.ಎಲ್.ಪಿ. ಪದ್ಮನಾಭ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಭೇಟಿಯಾಗಿ ಧೈರ್ಯ ತುಂಬಿದರು.
ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚುವಂತೆ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದರು.