ಬೆಂಗಳೂರು : ನೂತನ ಕೇಂದ್ರ ಸಚಿವರು ಹಾಗೂ ಸಂಸದರಿಗೆ ಬಿಜೆಪಿ ನೇತೃತ್ವದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಿದ್ದ ಬಿಜೆಪಿ ಹಾಗೂ ಜೆಡಿಎಸ್ನ ನೂತನ ಕೇಂದ್ರ ಸಚಿವರು ಹಾಗೂ ಸಂಸದರ ಅಭಿನಂದನಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಂಸದ ಬ್ರಿಜೇಶ್ ಚೌಟ ಅವರನ್ನು ಅಭಿನಂದಿಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶಾಲು ಹೊದಿಸಿ, ಹೂವಿನ ಹಾರ ಹಾಕಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ನೂತನ ಸಂಸದರು, ಪಕ್ಷದ ಶಾಸಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.