ಕಾರ್ಕಳ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗಿತ್ತಿದ್ದ ಬಾಲಕಿ ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪ ನಂದಳಿಕೆ ಕ್ರಾಸ್ ಬಳಿ ನಡೆದಿದೆ.
ಮೃತ ಬಾಲಕಿಯನ್ನು ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ (14) ಎಂದು ಗುರುತಿಸಲಾಗಿದೆ.
ದೇವಸ್ಥಾನಕ್ಕೆ ಪೂಜೆಗೆಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ಸಂದರ್ಭ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬಾಲಕಿಗೆ ಗಂಭೀರ ಗಾಯವಾಗಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



























