ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರವಿವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಯಡಿಯೂರಪ್ಪ ಅವರನ್ನು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸ್ವಾಗತಿಸಿದರು.

ಶಾಸಕರು, ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಬಿ.ಎಸ್. ಯಡಿಯೂರಪ್ಪ ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ 2 ಗಂಟೆಗೆ ಸುಳ್ಯಕ್ಕೆ ತೆರಳಲಿದ್ದಾರೆ. ಸುಳ್ಯದಲ್ಲಿ ಅವರು ಪಕ್ಷದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.


























