ಉತ್ತರ ಕನ್ನಡ : ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಿಮ್ ಕೊಠಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
ಶಿರಸಿಯ ಕೆಹೆಚ್ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಅವರ ನಿವಾಸಕ್ಕೆ ಬೆಂಕಿ ಹೊತ್ತಿಕೊಂಡಿದೆ.
ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಮೊದಲು ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಅದು ವ್ಯಾಪಿಸುತ್ತ ಮನೆಗೂ ಹೊತ್ತಿಕೊಂಡಿದೆ. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.


























