ಸುಬ್ರಹ್ಮಣ್ಯ : ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಡಿ.ಕೆ ಶಿವಕುಮಾರ್ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.
ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

























