ಬೆಳ್ತಂಗಡಿ : ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪದ ಕೊಳಂಬೆ ಉಮೇಶ್ ಗೌಡ ರವರ ಪುತ್ರಿ ವಿದ್ಯಾ (22) ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮನೆಯಲ್ಲಿಯೇ ಇರುತ್ತಿದ್ದ ವಿದ್ಯಾ ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಮೃತರು ತಾಯಿ ಸುನಂದ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.


























