ವಿಟ್ಲ : ಚಾಲಕನಿಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆ ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ವಿಟ್ಲ ಸಮೀಪದ ಮೈರ ಎಂಬಲ್ಲಿ ನಡೆದಿದೆ.
ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

























