ಬಂಟ್ವಾಳ : ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನರಿಕೊಂಬು ಎಂಬಲ್ಲಿ ನಡೆದಿದೆ.
ಬಂಟ್ವಾಳ ನಿವಾಸಿ ಶೇಖರ ಪೂಜಾರಿ ಅವರ ದ್ವಿತೀಯ ಪುತ್ರ ರಮೇಶ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ರಮೇಶ್ ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.
ಅತ್ಯಂತ ಸೌಮ್ಯ ಸ್ವಭಾವದ ರಮೇಶ್ ಸ್ಥಳೀಯ ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ರಮೇಶ್ ಸಹೋದರ ಕೂಡ ಕಳೆದ ವರ್ಷ ಹಳೆಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


























